Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿ ಸ್ಪರ್ಧೆಗಳಿಗೆ ಆಯ್ಕೆಯಾದ ಕ್ರೀಡಾ ಪಟುಗಳ ONLINE ನೊಂದಣಿ - 2026 (V.1)

ಸರ್ಕಾರದ ಮುಖ್ಯಕಾರ್ಯದರ್ಶಿಗಳು ಹಾಗೂ ಸರ್ಕಾರದ ಉನ್ನತದ ಅಧಿಕಾರಿಗಳೊಂದಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿರವರು ನೌಕರರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಸಲ್ಲಿಸಿದ ಮನವಿ ಹಾಗೂ ಸರ್ಕಾರದ ಸ್ಪಂದನೆ.

ಸರ್ಕಾರದ ಮುಖ್ಯಕಾರ್ಯದರ್ಶಿಗಳು ಹಾಗೂ ಸರ್ಕಾರದ ಉನ್ನತದ ಅಧಿಕಾರಿಗಳೊಂದಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿರವರು ನೌಕರರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಸಲ್ಲಿಸಿದ ಮನವಿ ಹಾಗೂ ಸರ್ಕಾರದ ಸ್ಪಂದನೆ.


ರಾಜ್ಯ ಸರ್ಕಾರಿ ನೌಕರರ ಜ್ವಲಂತ ಸಮಸ್ಯೆಗಳ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರ ನೇತೃತ್ವದ ನಿಯೋಗವು ಸರ್ಕಾರದ ಮಾನ್ಯ ಮುಖ್ಯಕಾರ್ಯದರ್ಶಿಯವರು ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಚರ್ಚಿಸಿದ್ದು, ಈ ಸಮಸ್ಯೆಗಳ ಬಗ್ಗೆ ಸರ್ಕಾರವು ಸಕಾರತ್ಮಕವಾಗಿ ಸ್ಪಂದಿಸಿದ್ದು ಸರ್ಕಾರದ ಆದೇಶಗಳ ನಿರೀಕ್ಷೆಯನ್ನು ಹೊಂದಿರುತ್ತೇವೆ.  

-::ಸಭೆಯಲ್ಲಿ ಚರ್ಚಿಸಲಾದ ವಿಷಯಗಳು ::-


ರಾಜ್ಯ ಸರ್ಕಾರದ ವತಿಯಿಂದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ' ಆಚರಿಸುವ ಸಂಬಂಧ ಮಾರ್ಗಸೂಚಿಗಳನ್ನು ಹೊರಡಿಸುವ ಕುರಿತು .

ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಅವಲಂಭಿತರಿಗೆ ನಗದುರಹಿತ ಚಿಕಿತ್ಸಾ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ .

ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್ , ವಾಟ್ಸ್ ಆಪ್ ಮೂಲಕ ಸರ್ಕಾರ , ಇಲಾಖೆ , ಮೇಲಾಧಿಕಾರಿಗಳು ಅಥವಾ ಅಧೀನದ ಸಿಬ್ಬಂದಿಗಳ ತೇಜೋವಧೆ ಅವಹೇಳನಕಾರಿ ಸಂದೇಶ ರವಾನಿಸುವ , ಸಂಭಾಷಿಸುವ ಅಧಿಕಾರಿ / ನೌಕರರ ಮೇಲೆ ನಾಗರೀಕ ಸೇವಾ ನಿಯಮಗಳನ್ವಯ ಶಿಸ್ತು ಕ್ರಮ ಜರುಗಿಸುವ ಬಗ್ಗೆ .
ರಾಜ್ಯ ಸರ್ಕಾರದ ಮಹಿಳಾ ನೌಕರರಿಗೆ ಚಾಲ್ತಿಯಲ್ಲಿರುವ ಪ್ರಸೂತಿ ರಜೆಯೊಂದಿಗೆ ಸೇವಾವಧಿಯಲ್ಲಿ ಆರು ತಿಂಗಳವರೆಗೆ ಮಕ್ಕಳ ಆರೈಕೆ ರಜೆ ಮಂಜೂರು ಮಾಡಿ ಆದೇಶ ಹೊರಡಿಸುವ ಬಗ್ಗೆ .
ರಾಜ್ಯ ಸರ್ಕಾರ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಮಹಿಳಾ ನೌಕರರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ.

ಸರ್ಕಾರಿ ನೌಕರರ - ಅಧಿಕಾರಿಗಳ ಇಲಾಖಾ ವಿಚಾರಣಾ ಪ್ರಕರಣಗಳನ್ನು ಕಾಲಮಿತಿಯೊಳಗೆ ಇತ್ಯರ್ಥಗೊಳಿಸುವ ಬಗ್ಗೆ
ಕೋವಿಡ್ -19 ಸಾಂಕ್ರಾಮಿಕ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡುವ ಬಗ್ಗೆ .





Comments

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

Followers