Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿ ಸ್ಪರ್ಧೆಗಳಿಗೆ ಆಯ್ಕೆಯಾದ ಕ್ರೀಡಾ ಪಟುಗಳ ONLINE ನೊಂದಣಿ - 2026 (V.1)

ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು Online ಮೂಲಕ ನೋಂದಣಿ ಮಾಡಿಕೊಂಡಿರುವ ಕ್ರೀಡಾಪಟುಗಳ ಪಟ್ಟಿ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು Online ಮೂಲಕ ನೋಂದಣಿ ಮಾಡಿಕೊಂಡಿರುವ ತಮ್ಮ ಜಿಲ್ಲೆಯ ಕ್ರೀಡಾಪಟುಗಳ ಪಟ್ಟಿಯನ್ನು ಜಿಲ್ಲಾ / ತಾಲ್ಲೂಕು ಶಾಖೆಯ ಅಧ್ಯಕ್ಷರಿಗೆ ಕಳುಹಿಸಿದೆ . ಈ ಕೆಳಕಂಡ ಮಾಹಿತಿಯನ್ನು ಆಯ್ಕೆಯಾಗಿರುವ ಕ್ರೀಡಾಪಟುಗಳ ಗಮನಕ್ಕೆ ತರಲು ಕೋರಿದೆ .




 - : ಕ್ರೀಡಾಪಟುಗಳ ಗಮನಕ್ಕೆ : -
  • ಜಿಲ್ಲೆಯಿಂದ ಆಯ್ಕೆಯಾದ Online ಕ್ರೀಡಾಪಟುಗಳ ಪಟ್ಟಿ ಆಯಾ ಜಿಲ್ಲಾ / ತಾಲ್ಲೂಕು ಶಾಖೆಗಳ ಅಧ್ಯಕ್ಷರ ಬಳಿ ಲಭ್ಯವಿರುತ್ತದೆ . 
  • ಸಂಬಂಧಿಸಿದ ಕ್ರೀಡಾಪಟುಗಳು ತಮ್ಮ ಕ್ರಮ ಸಂಖ್ಯೆಯನ್ನು ಜಿಲ್ಲಾ / ತಾಲ್ಲೂಕು ಅಧ್ಯಕ್ಷರಿಂದ ಪಡೆದುಕೊಳ್ಳುವುದು . 
  • ಸದರಿ ಕ್ರಮ ಸಂಖ್ಯೆಯನ್ನು ನೋಂದಣಿ ಸಮಯದಲ್ಲಿ ನೋಂದಣಿ ಕೌಂಟರ್‌ನಲ್ಲಿ ತಿಳಿಸಿ , ತಮ್ಮ ಇಲಾಖೆಯ ಗುರುತಿನ ಚೀಟಿಯನ್ನು ತೋರಿಸಿ ನೋಂದಣಿ ಮಾಡಿಸಿಕೊಳ್ಳುವುದು . 
  • ನೋಂದಣಿ ಕೌಂಟರ್‌ನಲ್ಲಿ ನೀಡುವ ಅಧಿಕೃತ Registration Card ನ್ನು ಪಡೆದು , ಟ್ರಾಕ್‌ಸೂಟ್ಸ್ , ಕ್ಯಾಪ್‌ಗಳನ್ನು ಪಡೆದುಕೊಳ್ಳುವುದು ಹಾಗೂ ಸದರಿ ಕಾರ್ಡ್‌ನ್ನು ಕ್ರೀಡೆ - ವಸತಿ , ಊಟ - ಉಪಹಾರಕ್ಕೆ ಬಳಸಿಕೊಳ್ಳತಕ್ಕದ್ದು .
  • ದಿನಾಂಕ : 22-10-2021ರಂದು ಸಂಜೆ 04-00 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಪಥ ಸಂಚಲನದಲ್ಲಿ ಟ್ರಾಕ್‌ಸೂಟ್ಸ್ ಮತ್ತು ಕ್ಯಾಪ್ ಧರಿಸಿ ಕಡ್ಡಾಯವಾಗಿ ಭಾಗವಹಿಸುವುದು . 
  • Online ಮೂಲಕ ಹೆಸರು ನೋಂದಾಯಿಸಿರುವ ಕ್ರೀಡಾಪಟುಗಳು ಮಾತ್ರ ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ .
  • Online ಮೂಲಕ ನೋಂದಣಿ ಮಾಡಿಕೊಳ್ಳದಿರುವ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ . 
  • Online ಮೂಲಕ ನೋಂದಣಿ ಮಾಡಿಕೊಂಡಿರುವ ತಮ್ಮ ಜಿಲ್ಲೆಯ ಕ್ರೀಡಾಪಟುಗಳ ಮಾಹಿತಿ , ವಿವರ , ಮೊಬೈಲ್ ಸಂಖ್ಯೆಯನ್ನು ನೀಡಲಾಗಿದ್ದು , ಪಟ್ಟಿಯಲ್ಲಿನ ಎಲ್ಲಾ ಕ್ರೀಡಾಪಟುಗಳಿಗೆ ಕ್ರೀಡಾಕೂಟದ ಸುತ್ತೋಲೆಗಳ ಬಗ್ಗೆ ಮಾಹಿತಿಗಳನ್ನು ನೀಡುವುದು .
  • ಮಾನ್ಯ ಜಿಲ್ಲಾ / ತಾಲ್ಲೂಕು ಅಧ್ಯಕ್ಷರಿಗೆ PDF Format ನಲ್ಲಿ ಆಯಾ ಜಿಲ್ಲೆಯ ಪಟ್ಟಿಯನ್ನು ಸಂಘದ ಸಾಮಾಜಿಕ ಜಾಲತಾಣದಲ್ಲಿ ಪ್ರಚುರಪಡಿಸಿದ್ದು , ತಾವುಗಳು ಅದರ ಪ್ರತಿಯನ್ನು ಪಡೆದು ಹಾಗೂ ಮೇಲ್ಕಂಡ ಅಂಶಗಳನ್ನು ಎಲ್ಲಾ ಕ್ರೀಡಾಪಟುಗಳಿಗೆ ಮನವರಿಕೆ ಮಾಡುವ ಮೂಲಕ ಕ್ರೀಡಾಕೂಟಗಳ ಯಶಸ್ವಿಗೆ ಸಹಕರಿಸುವುದು . ಈ ಬಗ್ಗೆ ಯಾವುದೇ ಗೊಂದಲಗಳಿಗೆ ಅವಕಾಶ ನೀಡದೆ ತಮ್ಮ ತಮ್ಮ ಜಿಲ್ಲೆಯ ಉಸ್ತುವಾರಿಯನ್ನು ಜಿಲ್ಲಾಧ್ಯಕ್ಷರು ನಿರ್ವಹಿಸಿ ಕ್ರೀಡಾಕೂಟದ ಯಶಸ್ವಿಗೆ ಸಹಕರಿಸಲು ಕೋರಿದೆ . 

                                                                               -ಸಿ.ಎಸ್.ಷಡಾಕ್ಷರಿ, ರಾಜ್ಯಾಧ್ಯಕ್ಷರು
ಗೆ ಮಾನ್ಯ ಜಿಲ್ಲಾಧ್ಯಕ್ಷರು / ತಾಲ್ಲೂಕು ಅಧ್ಯಕ್ಷರು / ರಾಜ್ಯ ಪರಿಷತ್ ಸದಸ್ಯರು / ಕ್ರೀಡಾಪಟುಗಳ ಆದ್ಯ ಗಮನಕ್ಕೆ , 



ಜಿಲ್ಲಾವಾರು ಪಟ್ಟಿಗಾಗಿ ಇಲ್ಲಿ ಕ್ಲಿಕ್ ಮಾಡಿ ➡️ https://drive.google.com/drive/folders/1DfTeJKME6crUlyexnp_dx1gGb_iwDKkf?usp=sharing

Comments

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

Followers