Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿ ಸ್ಪರ್ಧೆಗಳಿಗೆ ಆಯ್ಕೆಯಾದ ಕ್ರೀಡಾ ಪಟುಗಳ ONLINE ನೊಂದಣಿ - 2026 (V.1)

ದಿನಾಂಕ: 25-02-2022 ರಂದು ಮಾನ್ಯ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ನಡೆದ ಆಯವ್ಯಯ ಪೂರ್ವಭಾವಿ ಸಭೆ

ದಿನಾಂಕ: 25-02-2022 ರಂದು ಮಾನ್ಯ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ನಡೆದ ಆಯವ್ಯಯ ಪೂರ್ವಭಾವಿ ಸಭೆ.


2022-23 ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಮಾನ್ಯ ಮುಖ್ಯ ಮಂತ್ರಿಗಳೊಂದಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿವರು ಹಾಗೂ ಪದಾಧಿಕಾರಿಗಳ ನಿಯೋಗವು ಭಾಗವಹಿಸಿ ಕೇಂದ್ರ ಮಾದರಿಯ ವೇತನ ಜಾರಿ ಹಾಗೂ ಎನ್.ಪಿ.ಎಸ್. ರದ್ದುಗೊಳಿಸುವ ಸಂಬಂಧ ಅಂಕಿ-ಅಂಶಗಳೊಂದಿಗೆ ಪ್ರಸ್ತಾವನೆಯನ್ನು ಮಂಡಿಸಿದರು.

ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಪರಿಷ್ಕರಣೆಗಾಗಿ    “ಅಧಿಕಾರಿಗಳ ವೇತನ ಸಮಿತಿ” ರಚಿಸಲು ತಾತ್ವಿಕ ಒಪ್ಪಿಗೆ ಸೂಚಿಸಿ, ಆಯವ್ಯಯದಲ್ಲಿ ಪ್ರಸ್ತಾಪಿಸುವ ಭರವಸೆಯನ್ನು ನೀಡಿದರು.
ಇತ್ತೀಚಿಗೆ ರಾಜಸ್ಥಾನ ಸರ್ಕಾರವು ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಘೋಷಿಸಿದ್ದು, ಅದರಂತೆ ಅಧ್ಯಯನ ನಡೆಸಿ ಒ.ಪಿ.ಎಸ್. ಜಾರಿಗೆ ತರುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.
ಕರ್ತವ್ಯ ನಿರತ ಸರ್ಕಾರಿ ಅಧಿಕಾರಿ/ನೌಕರರ ಮೇಲಿನ ಹಲ್ಲೆಗಳನ್ನು ನಿಯಂತ್ರಿಸಲು ಹಾಲಿ ಇರುವ ಕಾಯ್ದೆಗೆ ತಿದ್ದುಪಡಿ ತಂದು ಜಾಮೀನುರಹಿತ ಬಂಧನದಂತಹ ಕಠಿಣ ಕಾನೂನನ್ನು ಜಾರಿಗೆ ತರುವ ಭರವಸೆ ನೀಡಿದರು.
ನೌಕರರುಗಳ ತರಬೇತಿಗಾಗಿ 6 ಜಿಲ್ಲಾ ತರಬೇತಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಅನುಭವಿ ವಿಷಯ ತಜ್ಞರನ್ನು ನೇಮಿಸುವ ಮೂಲಕ ಪುನಶ್ಚೇತನಗೊಳಿಸುವ ಭರವಸೆ ನೀಡಿದರು

ಈ ಸಭೆಯಲ್ಲಿ ಆರ್ಥಿಕ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳಾದ     ಶ್ರೀ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳು ಶ್ರೀ ಮಂಜುನಾಥ್ ಪ್ರಸಾದ್, ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀ ಪಿ.ಸಿ. ಜಾಫರ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಯವರಾದ ಶ್ರೀಮತಿ ಪಿ. ಹೇಮಲತರವರು ಉಪಸ್ಥಿತರಿದ್ದರು.

Comments

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

Followers